ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ.
ಬ್ರಿಗೇಡ್ ವಿವಾದ ಬಗೆಹರಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜನವರಿ 27ರಂದು ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಬುಲಾವ್ ನೀಡಲಾಗಿದೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬ್ರಿಗೇಡ್‌ಗೆ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡಬೇಕು ಎಂದು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ