Publish Date: Thu, 04 May 2023 (16:50 IST)
Updated Date: Thu, 04 May 2023 (16:46 IST)
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ?.. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತನ ಹೆಸರು ಇಟ್ಟುಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.. ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ ಎಂದು ಪ್ರಶ್ನಿಸಿದ್ರು.. ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು ನೀಡ್ತೀವಿ. ಆಂಜನೇಯ ದೇಗುಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದರು.