ಶಿರಸಿ :ಖಾಸಗಿ ಸಂಸ್ಥೆ ನೀಡುವ ಎಫ್‌ಎಸ್‌ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ಆ ವರದಿಯ ಪ್ರಕಾರ ತನಿಖೆ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆವಿಚಾರವಾಗಿ ಬುಧವಾರ ಶಿರಸಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರು ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯ ಬಳಿಕ ಈ ಕುರಿತು ತನಿಖೆ ನಡೆದು ಎರಡು ದಿನಗಳ ಹಿಂದಷ್ಟೇ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.