ಸಿಮೀತ ದಾಳಿ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವ ಬಿಜೆಪಿ, ಎಲ್ಲವೂ ತಮ್ಮಿಂದಲೇ ಆಗಿದೆ ಎಂದು ಹೇಳುವ ಮೂಲಕ ಭಾರತೀಯ ಸೈನಿಕರಿಗೆ ಅಪಮಾನ ಮಾಡುತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ಬಗ್ಗೆ ಯಾರು ಸಹಾನುಭೂತಿ ತೋರಿಲ್ಲ. ಎಲ್ಲರೂ ಉಗ್ರರನ್ನು ನಾಶ ಮಾಡಿ ಎಂದೇ ಹೇಳಿದ್ದಾರೆ. ಆದರೆ, ಉಗ್ರರನ್ನು ಮಟ್ಟ ಹಾಕುವುದನ್ನು ಬಿಟ್ಟು ದಾಳಿಯ ಹೆಸರಿನಲ್ಲಿ ಕೇಂದ್ರ ಸರಕಾರ ಪ್ರಚಾರ ಪಡೆಯುತ್ತಿದೆ ಎಂದರು.
ಮಹದಾಯಿ ವಿಚಾರ............
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಂದ ಸಂಧಾನ ಸಭೆ ನಡೆಸುವ ಬದಲು ಪ್ರಧಾನಿ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆಯಲಿ ಎಂದು ಆಗ್ರಹಿಸಿದರು.
ಮೂರು ರಾಜ್ಯಗಳ ಮುಖ್ಯಮಂತ್ರಿ ಹುದ್ದೆಗೆ ಸಮಾನ ಗೌರವವಿದೆ, ಹೀಗಾಗಿ ಮಹದಾಯಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಅವರಿಂದ ಸಂಧಾನ ಸಭೆ ಎಷ್ಟು ಸರಿ. ನೀರಿನ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ