Publish Date: Fri, 26 Oct 2018 (19:52 IST)
Updated Date: Fri, 26 Oct 2018 (19:53 IST)
ಮಂಡ್ಯ ಉಪಚುನಾವಣೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂಗಳ ಪ್ರಚಾರ ಕಾವೇರಿತ್ತು.
ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.
ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ, ಯಡಿಯೂರಪ್ಪ ಸಹ ಮತ್ತೊಂದು ಕಡೆ ಪ್ರಚಾರ ನಡೆಸಿದರು.
ಕುಮಾರಸ್ವಾಮಿ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣಗಳಲ್ಲಿ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದರು.