ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಥಾಪಿಸಿರೋದು ರಾಯಣ್ಣ ಬ್ರಿಗೇಡ್ ಅಲ್ಲ. ಅದು ಈಶ್ವರಪ್ಪ ಬ್ರಿಗೇಡ್. ತಮ್ಮ ಸ್ವಾರ್ಥಕ್ಕಾಗಿ ಬ್ರಿಗೇಡ್ ಸ್ಥಾಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಗುಡುಗಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಮ ಲಕ್ಷಣರಂತೆ ಎಂದು ಈಶ್ವರಪ್ಪ ಹೇಳುತ್ತಿದ್ದರು. ಆದರೆ, ಈಶ್ವರಪ್ಪ ಅವರು ಯಾವಾಗ ರಾವಣರಾಗುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಈಶ್ವರಪ್ಪ ತಮ್ಮ ಸ್ವಾರ್ಥಕ್ಕಾಗಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿಕೊಂಡಿದ್ದಾರೆ. ಕುತಂತ್ರಿಗಳು ಒಟ್ಟಾರೆ ಸೇರಿ ಈ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ