Webdunia - Bharat's app for daily news and videos

Install App

ಜೆಡಿಎಸ್ ಶಾಸಕನ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ

Webdunia
ಶನಿವಾರ, 9 ಫೆಬ್ರವರಿ 2019 (18:26 IST)
ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಾಮ್ರಾಟ್ ಹೋಟೆಲ್ ನಲ್ಲಿ  ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.  ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ .ರವಿಕುಮಾರ ಹೇಳಿದರು.

ಗುರುಮಿಟಕಲ್ ಸ್ಥಳೀಯ ಜೆಡಿಎಸ್ ಶಾಸಕರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದ ಎಂಟು ತಿಂಗಳುಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರ ಸರಕಾರದ ಬಹುತೇಕ ಯೋಜನೆಗಳನ್ನು ತಾವೇ ಮಾಡಿಸಿದ್ದು ಎಂದು ಹೇಳುತ್ತಾ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಇವರು, ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಶಾಸಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments