Publish Date: Sat, 31 Mar 2018 (08:50 IST)
Updated Date: Sat, 31 Mar 2018 (08:51 IST)
ಮೈಸೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೀತಿ ಸಂಹಿತ ಉಲ್ಲಂಘಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಜು ಕುಟುಂಬವರ್ಗದವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ಹಣ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಇಲ್ಲ, ರಾಜು ಹತ್ಯೆಯಾದ ಸಂದರ್ಭದಲ್ಲಿಯೇ ಹಣ ನೀಡಿದ್ದೆವು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಮಜಾಯಿಷಿ ನೀಡಿದ್ದಾರೆ.
ಒಂದು ವೇಳೆ ಹಣ ನೀಡಿದ್ದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಆದರೆ ನಾವು ಹಣ ನೀಡಿಲ್ಲ. ಸಿಎಂ ಸಿದ್ದರಾಮಯ್ಯನವರೇ ತಮ್ಮ ಕ್ಷೇತ್ರದಲ್ಲಿ ಹಣ ಹಂಚಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಶೋಭಾ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ