Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿಶ್ವಾಸ ಮತ ಯಾಚನೆಗೆ ಬಿಜೆಪಿ ಮುಖಂಡರು ಯಾರೂ ಕೂಡ ಗೈರು ಹಾಜರಾಗಬೇಡಿ - ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ

ವಿಶ್ವಾಸ ಮತ ಯಾಚನೆಗೆ ಬಿಜೆಪಿ ಮುಖಂಡರು ಯಾರೂ ಕೂಡ ಗೈರು ಹಾಜರಾಗಬೇಡಿ - ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ
ಬೆಂಗಳೂರು , ಶುಕ್ರವಾರ, 25 ಮೇ 2018 (13:53 IST)
ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಯಾರೂ ಕೂಡ ಗೈರು ಹಾಜರಾಗಬೇಡಿ ಎಂದು ಬಿಜೆಪಿ ಹೈ ಕಮಾಂಡ್ ಸೂಚನೆ ನೀಡಿದ್ದಾರೆ.


ಈ ಬಗ್ಗೆ ಸಲಹೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು,’ ವಿಶ್ವಾಸ ಮತದ ವೇಳೆ ಗೊಂದಲಕ್ಕೆ ಅವಕಾಶ ನೀಡಬೇಡಿ. ಅಲ್ಲದೇ ಶಾಂತಿಯುತವಾಗಿ ವರ್ತಿಸಬೇಕು. ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ. ಕರ್ನಾಟಕ ರಾಜಕಾರಣವು ದೇಶದ ಹಲವು ಪಕ್ಷಗಳನ್ನು ಒಗ್ಗೂಡಿಸಿದೆ. ಬಿಜೆಪಿಯಿಂದ ಒಂದು ಕಡೆ ತಪ್ಪಾದರೂ ಕೂಡ ಹಲವು ಕಡೆ ಅದಕ್ಕೆ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.


ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನಿರ್ದೇಶನದಂತೆ ನಡೆದುಕೊಳ್ಳಬೇಕು. ಕರ್ನಾಟಕದಲ್ಲಿ ರಚನೆಯಾದ ಈ ಮೈತ್ರಿ ಸರ್ಕಾರ ಹಲವು ದಿನಗಳ ಕಾಲ ಉಳಿಯುವುದಿಲ್ಲ. ಶಾಸಕರು ವಿಶ್ವಾಸವನ್ನು ಕಳೆದುಕೊಳ್ಳಬೇಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ಆಗಿ ಆಯ್ಕೆಯಾದ ರಮೇಶ್ ಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ