ಎತ್ತಿನ ಹೊಳೆ ಯೋಜನೆಯಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಮಂಗಳೂರಿನಲ್ಲೊಂದು ಕೋಲಾರದಲ್ಲೊಂದು ಮಾತನಾಡುವ ಬಿಜೆಪಿಯವರು ಎರಡು ತಲೆಯ ಹಾವುಗಳು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಕಿಡಿಕಾರಿದ್ದಾರೆ.
ಎತ್ತಿನ ಹೊಳೆ ಯೋಜನೆ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಇ ವೇಳೆ ಕರಾವಳಿ ಭಾಗದ ಜನ ಪ್ರತಿನಿಧಿಗಳು ಹಾಜರಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆ ವಿಫಲವಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಎತ್ತಿನ ಹೊಳೆ ಯೋಜನೆ ಜಾರಿಗೆ ವಿಧಾನ ಮಂಡಲದಲ್ಲಿ ಒಪ್ಪಿಗೆ ಸಿಕ್ಕಿದೆ. ಹಾಗೂ ಕ್ಯಾಬಿನೆಟ್‌ನಲ್ಲೂ ಸಹ ಒಪ್ಪಿಗೆ ಸಿಕ್ಕಿದೆ. ಹೀಗಿರುವಾಗ ಯೋಜನೆ ನಿಲ್ಲಿಸಲು ಸಾಧ್ಯವೆ? ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರಿಗೆ ತಾಕತ್ತಿದ್ದರೆ ನಿಲುವಳಿ ಸೂಚನೆ ಮಂಡಿಸಲಿ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದಾದರು ಎತ್ತಿನ ಹೊಳೆ ಯೋಜನೆಯನ್ನು ನಿಲ್ಲಿಸುತ್ತೇನೆ ಎಂದು ಸಚಿವ ರಮಾನಾಥ್ ರೈ ಭರವಸೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ