Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆರೆಸ್ಸೆಸ್‌ನ ಕೇಶವಕೃಪಾದಲ್ಲಿ ಬಿಜೆಪಿ ನಾಯಕರ ಸಭೆ ನಡೆದಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಎದುರಿಸುವ ಬಗ್ಗೆ ರಣತಂತ್ರಗಳನ್ನು ರೂಪಿಸಲಾಗುತ್ತಿದೆ ಎನ್ನಲಾಗುತ್ತಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದಾರೆ.
ಆರೆಸ್ಸೆಸ್‌ನ ಪ್ರಮುಖ ನಾಯಕರು, ಬಿಜೆಪಿ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.