ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಗಂಡಸರಿಲ್ಲ ಎಂದಿದ್ದ ಬಿಜೆಪಿ ಶಾಸಕ ರಾಜು ಕಾಗೆ, ಗಂಡಸೇ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ತಮ್ಮ ಘನತೆ ಗೌರವಕ್ಕೆ ತಕ್ಕಂತೆ ಹೇಳಿಕೆ ನೀಡಬೇಕು ಎಂದು ಕಿಡಿಕಾರಿದ್ದಾರೆ.
ನಮ್ಮ ಪಕ್ಷದಲ್ಲಿ ಬೇರೆಯವರನ್ನು ತಂದು ನಿಲ್ಲಿಸಿ ಗೆಲ್ಲಿಸುವ ಸಾಮರ್ಥ ಇದೆ. ನಮ್ಮ ಬಗ್ಗೆ ಮಾತನಾಡುವ ಅವರು ಗಂಡಸೇ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಶಾಸಕ ರಾಜು ಕಾಗೆ ಬಳಸಿರುವ ಪದಗಳು ಕಾಂಗ್ರೆಸ್ ಶಾಸಕರಿಗೆ ಆಕ್ರೋಶ ಉಂಟು ಮಾಡಿದ್ದವು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.