Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕ್ಷಮೆ ಕೇಳಿದ ಬಿಜೆಪಿ ಶಾಸಕನ ನಡೆಗೆ ಸಿಎಂ ಸಿದ್ದರಾಮಯ್ಯ ಫಿದಾ

ಕ್ಷಮೆ ಕೇಳಿದ ಬಿಜೆಪಿ ಶಾಸಕನ ನಡೆಗೆ ಸಿಎಂ ಸಿದ್ದರಾಮಯ್ಯ ಫಿದಾ

Sampriya

ಬೆಂಗಳೂರು , ಮಂಗಳವಾರ, 3 ಸೆಪ್ಟಂಬರ್ 2024 (19:04 IST)
Photo Courtesy X
ಬೆಂಗಳೂರು: ತಾವಾಡಿದ ಮಾತುಗಳಿಗೆ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ ಎಂದು ಪ್ರತಿಕ್ರಿಯಿಸಿ ಶ್ಲಾಘಿಸಿದ್ದಾರೆ.

ಇನ್ನು ಅರವಿಂದ್ ಬೆಲ್ಲದ್ ಅವರ ಕ್ಷಮಾಪಣಾ ಪತ್ರಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ ಎಂದಿದ್ದಾರೆ.

ಅರವಿಂದ್ ಕ್ಷಮಾಪಣಾ ಪತ್ರದಲ್ಲಿ ಏನಿದೆ:

ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು 'ಏನು ಅಪ್ಪನ ಮನೆ ಆಸ್ತಿನಾ' ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ
ಬಳಕೆಯು ನನಗೆ ಶೋಭೆ ತರುವುದಿಲ್ಲ. ತಮಗೆ ಈ ಪತ್ರದ ಮೂಲಕ ಮುಖಾಂತರ ಕ್ಷಮೆ ಕೇಳುತ್ತಿದ್ದೇನೆ ಎಂದು ಪತ್ರ ಬರೆದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು,  ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ  ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.

ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿನ ದರ ಇಳಿಸಿ ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ: ಎಚ್ ಡಿ ಕುಮಾರಸ್ವಾಮಿ ಆಕ್ರೋಶ