ಚಿತ್ರದುರ್ಗ : ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಕ್ರಮವಾಗಿ ಮರಳು ದಂಧೆಯಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್ ಈ ಬಗ್ಗೆ ಮಾತನಾಡಲು ಪೊಲೀಸ್ ಠಾಣಿಗೆ ಬಂದಿದ್ದಾರೆ. ಅಲ್ಲಿ ಶಾಸಕರ ಮಾತಿಗೆ ಬೆಲೆ ಕೊಡದಿದ್ದಾಗ ಇದನ್ನು ನಾನು ಖಂಡಿಸುತ್ತೇನೆ ಎಂದು ಠಾಣೆಯ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದಾರೆ.
ಆ ವೇಳೆ ಬೆಂಬಲಿಗರು ಹಾಗೂ ಪೊಲೀಸರು ತಡೆದು ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪೆಟ್ರೋಲ್ ಕಿವಿ, ಕಣ್ಣು ಮತ್ತು ಮೂಗಿನ ಒಳಗೆ ಹೋಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಕಣ್ಣಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಣ್ಣಿನಲ್ಲಿ ಪೆಟ್ರೋಲ್ ಹೋಗಿದ್ದರಿಂದ ಸಣ್ಣ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.