Publish Date: Wed, 16 Aug 2023 (18:03 IST)
Updated Date: Wed, 16 Aug 2023 (18:07 IST)
ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳುವ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಎಂದರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗದೇ ಹೋದರೂ ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್ ಸಿಗಬೇಕಾದರೆ ತುಂಬಾ ದಿನ ಆಗುತ್ತದೆ ಅಷ್ಟೇ ಎಂದರು.