ಬಿಜೆಪಿ ಸಂಸದರೊಬ್ಬರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಕೋವಿಡ್ – 19 ನಿಂದ ಗುಣಮುಖರಾಗಿದ್ದಾರೆ.
ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಕುಟುಂಬ ಸದಸ್ಯರು ಈಗ ರಾಜಾಜಿನಗರ ನಿವಾಸದಲ್ಲಿ ಹೋಮ್ ಕ್ಯಾರೆಂಟೈನ್ ಇದ್ದಾರೆ.
ಸಂಸದರ ಆಪ್ತ ಸಿಬ್ಬಂದಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.