ಬಿಜೆಪಿ ನಾಯಕರು ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮಕ್ಕೆ ಹೋಗಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಒಬ್ಬರ ಅಭಿಪ್ರಾಯದಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಒಮ್ಮತದ ಅಭಿಪ್ರಾಯಗಳು ಪಕ್ಷದಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದರು.
ಪಕ್ಷದಲ್ಲಿ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಚರ್ಚೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮುಂದಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ