ಮೈಸೂರು: ಸಿಎಂ ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ಅವರಿಗೇ ಸೋಲುಣಿಸಲು ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆಯಾ? ಹಾಗೊಂದು ಗುಸು ಗುಸು ಬಿಜೆಪಿ ವಲಯದಿಂದ ಕೇಳಿಬರುತ್ತಿದೆ.
ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಸಂಖ್ಯೆ ಹೆಚ್ಚು. ಹೀಗಾಗಿ ಈ ಸಮುದಾಯಕ್ಕೆ ಸೇರಿದ ಪ್ರಮುಖರನ್ನೇ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಎಸ್ ವೈ ಪುತ್ರ ವಿಜಯೇಂದ್ರರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಬಂದಿತ್ತು.
ಆದರೆ ಇನ್ನೊಂದು ಮೂಲಗಳ ಪ್ರಕಾರ ಲಂಡನ್ ನಲ್ಲಿ ಬಸವಣ್ಣನ ಮೂರ್ತಿ ಸ್ಥಾಪಿಸಿದ ಕೀರ್ತಿಯ ಡಾ. ನೀರಜ್ ಪಾಟೀಲ್ ರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಆದರೆ ಇದಕ್ಕೆ ಇಲ್ಲಿನ ಬಿಜೆಪಿ ನಾಯಕರದ್ದೇ ಅಸಮಾಧಾನವೂ ಇದೆ. ಅದೇನೇ ಇದ್ದರೂ ಸಿಎಂ ಸಿದ್ದರಾಮಯ್ಯಗೆ ಈ ಬಾರಿ ವರುಣಾ ಸುಲಭ ತುತ್ತಾಗದಂತೆ ನೋಡಿಕೊಳ್ಳಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ