ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಕೈವಾಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮೇಲೆ ಅಲ್ಪಸ್ವಲ್ಪ ಗೌರವವಿದೆ. ಅವರ ಬಗ್ಗೆ ಇರುವ ಅಲ್ಪಸ್ವಲ್ಪ ಗೌರವನ್ನು ಅವರು ಉಳಿಸಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಗಲಭೆಗೆ ಸಂಬಂಧಿಸಿದಂತೆ ದೇಶಭಕ್ತ ಆರ್‌ಎಸ್‌ಎಸ್ ಸಂಘಟನೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ರಾಜ್ಯ ಸರಕಾರ ತನ್ನ ಹುಳುಕು ಮುಚ್ಚಿ ಹಾಕಿಕೊಳ್ಳಲು ಆರ್‌ಎಸ್‌ಎಸ್ ಮೇಲೆ ಆರೋಪ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡಲೇ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಿ, ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಕಾವೇರಿ ಗಲಭೆಗೆ ಆರ್‌ಎಸ್‌ಎಸ್ ಕಾರಣ. ಈ ಕುರಿತು ತನಿಖೆ ನಡೆಸಿ ಸತ್ಯಾಸತ್ಯಗೆಗಳನ್ನು ಬಯಲಿಗೆಳೆಯಬೇಕು. ಇಲ್ಲದಿದ್ದರೇ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ