Webdunia - Bharat's app for daily news and videos

Install App

ರಾಜ್ಯದ ಮುಡಾ, ವಾಲ್ಮೀಕಿ ಹಗರಣದ ಬಗ್ಗೆ ದೆಹಲಿಯಲ್ಲಿ ನಿಂತು ಕಾಂಗ್ರೆಸ್ ಸರ್ಕಾರದ ಮರ್ಯಾದೆ ತೆಗೆದ ಬಿಜೆಪಿ

Krishnaveni K
ಶುಕ್ರವಾರ, 26 ಜುಲೈ 2024 (14:00 IST)
26-7-2024
 
ಗೆ, 
ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತರೂಢ ಕಾಂಗ್ರೆಸ್  ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿರುವುದು ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಾಚಾರಮಾಡಿರುವುದನ್ನು ಖಂಡಿಸಿ ಇಂದು ಸಂಸತ್ ಭವನದ ಆವರಣದಲ್ಲಿ ಜನಪ್ರತಿನಿಧಿಗಳ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.

ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ ಪಾರ್ಟಿಗಳ (ಜೆಡಿಎಸ್) ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿದರು. ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

‘ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂಬರ್ಥವುಳ್ಳ ಹಿಂದಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.

‘ರಿಟರ್ನ್ ದಿ ಲೂಟೆಡ್ ಮನಿ ಬಿಲಾಂಗಿಂಗ್ ಟು ಎಸ್‍ಟಿ ಕಮ್ಯುನಿಟಿ’, ಮುಡಾ ಹಗರಣದಲ್ಲಿ ಕೋಟಿ ಕೋಟಿ ನುಂಗಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ- ಇವೇ ಮೊದಲಾದ ಪ್ಲಕಾರ್ಡ್ ಹಿಡಿದು ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಸದ ಜಗದೀಶ ಶೆಟ್ಟರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪಿ.ಸಿ.ಮೋಹನ್ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments