Publish Date: Fri, 21 Sep 2018 (16:51 IST)
Updated Date: Fri, 21 Sep 2018 (16:54 IST)
ದಂಗೆ ಏಳಲು ಕರೆ ನೀಡಬೇಕಾಗುತ್ತದೆ ಎಂಬ ಸಿಎಂ ಹೆಚ್ಡಿಕೆ ಹೇಳಿಕೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೀದರ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನು ಬಿಜೆಪಿ ಕಾರ್ಯಕರ್ತರು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಶೈಲೇಂದ್ರ, ಬೀದರ್ ಸಂಸದ ಭಗವಂತ ಖೂಬಾ, ಎಮ್ ಎಲ್ ಸಿ ರಘುನಾಥ ಮಲ್ಕಾಪುರೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.