ನಗರದಲ್ಲಿ ಆಯೋಜಿಸಲಾದ ಬೃಹತ್ ದಲಿತ ಸಮಾವೇಶದಲ್ಲಿ ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ ಕೆ. ಶಿವರಾಮು ಕಮಲ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿರುವುದು ಹಲವು ಹಿರಿಯ ನಾಯಕರ ಅಸಮಧಾನಕ್ಕೆ ಕಾರಣವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸದೆ ಕೆ.ಶಿವರಾಮ್ ಅವರನ್ನು ತರಾತುರಿಯಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದು ಹಿರಿಯ ನಾಯಕರು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಯಡಿಯೂರಪ್ಪ ಯಾರ ಸಲಹೆಗಳನ್ನು ಕೇಳದೆ ತಮ್ಮದೇ ಅಭಿಪ್ರಾಯವನ್ನು ಬಿಜೆಪಿ ಪಕ್ಷದ ಮೇಲೆ ಹೇರುತ್ತಿದ್ದಾರೆ ಎಂದು ಹಿರಿಯ ನಾಯಕರು ಆರೋಪಿಸಿದ್ದಾರೆ.
ಅನ್ಯ ಕಾರ್ಯಕ್ರಮಗಳ ನೆಪವೊಡ್ಡಿ ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಹಿರಿಯ ನಾಯಕರು ಬೆಂಗಳೂರು ನಗರದಿಂದ ದೂರವಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ನಡೆಯಲಿರುವ ದಲಿತ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದರೂ ಕೂಡಾ ಹಿರಿಯ ನಾಯಕರು ಕ್ಯಾರೆ ಎನ್ನದಿರುವುದು ಪಕ್ಷದಲ್ಲಿನ ಭಿನ್ನಮತ ಮತ್ತಷ್ಟು ಹೆಚ್ಚಲು ಕಾರಣವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ