Webdunia - Bharat's app for daily news and videos

Install App

ದಕ್ಷಿಣ ಭಾರತದ ಇತಿಹಾಸದಲ್ಲೇ ಬಿಜೆಪಿ ಸಾಧನೆ

Webdunia
ಮಂಗಳವಾರ, 14 ಮಾರ್ಚ್ 2023 (14:05 IST)
2007ರಲ್ಲಿ ಜೆಡಿಎಸ್ನಿಂದಾದ ವಿಶ್ವಾಸ ದ್ರೋಹ, ರಾಜಕೀಯದಲ್ಲಾದ ಕೆಲವು ನಾಟಕೀಯ ಬೆಳವಣಿಗೆಗಳನ್ನೇ ಮುಖ್ಯ ವಿಷಯವಾಗಿಸಿಕೊಂಡು 2008ರ ಚುನಾವಣೆ ಎದುರಿಸಿದ ಬಿಜೆಪಿಗೆ ಅಚ್ಚರಿಯ ಯಶಸ್ಸು ದೊರೆಯಿತು.

2008ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 110 ಸ್ಥಾನ ಗಳಿಸಿ ದೊಡ್ಡಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ 80 ಸ್ಥಾನಗಳನ್ನು ಜಯಿಸಿದರೆ, ಜೆಡಿಎಸ್ ಕೇವಲ 28 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಉಳಿದಂತೆ ಪಕ್ಷೇತರ ಆರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆರು ಪಕ್ಷೇತರ ಶಾಸಕರ ನೆರವಿನಿಂದ ಸರ್ಕಾರ ರಚಿಸಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು.

ದಕ್ಷಿಣ ಭಾರತದಲ್ಲೇ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿ ಇತಿಹಾಸ ಬರೆಯಿತು. ಬಳಿಕ ದೇಶದಲ್ಲೇ ಮೊದಲ ಬಾರಿಗೆ ಆಪರೇಷನ್ ಕಮಲಕ್ಕಿಳಿದ ಬಿಜೆಪಿ ಪ್ರತಿಪಕ್ಷಗಳ ಶಾಸಕರನ್ನ ಸೆಳೆದು ರಾಜೀನಾಮೆ ಕೊಡಿಸಿ ಸರ್ಕಾರದ ಬಲ ಹೆಚ್ಚಿಸಿಕೊಂಡಿತು. ಸಂಖ್ಯಾಬಲದಿಂದ ಸರ್ಕಾರ ಸುಭದ್ರವಾಗಿದ್ದರೂ ಆಂತರಿಕ ಭಿನ್ನಮತ ಯಡಿಯೂರಪ್ಪ ಅವರಿಗೆ ಮಗ್ಗಲು ಮುಳ್ಳಾಗಿ ಕಾಡಿತು.

ಪ್ರತಿಪಕ್ಷಗಳ ಹದ್ದಿನಕಣ್ಣು, ಸಾಲುಸಾಲು ಅವ್ಯವಹಾರದ ದಾಖಲೆಗಳು ಬಿಡುಗಡೆಯಾಗಿದ್ದು ಯಡಿಯೂರಪ್ಪ ಅವರನ್ನು ಮತ್ತಷ್ಟು ಹೈರಾಣಾಗಿಸಿತು. ಇದನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಬಳ್ಳಾರಿಗೆ ಪಾದಯಾತ್ರೆ ನಡೆಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments