Select Your Language

Notifications

webdunia
webdunia
webdunia
webdunia

ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿ ಹೋರಾಟ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

Assembly Elections

Sampriya

ಬೆಂಗಳೂರು , ಭಾನುವಾರ, 7 ಸೆಪ್ಟಂಬರ್ 2025 (12:46 IST)
ಬೆಂಗಳೂರು: ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬ್ಯಾಲೆಟ್ ಪೇಪರ್  ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ. ಕಾಂಗ್ರೆಸ್‌ಗೆ ಈಗ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಅಂತ ಸಿಎಂ, ಡಿಸಿಎಂ ಹೇಳಬೇಕು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿದ್ದಾರೆ. ಕಾಂಗ್ರೆಸ್ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.  

ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎನ್ನುತ್ತಿದ್ದಾರೆ. ನಾವು ಬ್ಯಾಲೆಟ್ ಪೇಪರ್‌ಗೆ ಹೆದರುತ್ತಿಲ್ಲ, ಅದರ ಅವಶ್ಯಕತೆ ಇಲ್ಲ ಎಂದರು.  

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್‌: ಎರಡು ವಾರಗಳಲ್ಲಿ ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ