Publish Date: Sat, 22 Jul 2023 (16:01 IST)
Updated Date: Sat, 22 Jul 2023 (16:03 IST)
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸರ್ಕಾರ ಸಮರ ಮುಂದುವರಿಸಿದೆ.ಶಾಸಕರ ಸಸ್ಪೆಂಡ್‌ಗೆ ಖಂಡನೆ ವ್ಯಕ್ತಪಡಿಸಿದೆ. ಅಧಿಕಾರಿಗಳ ದುರ್ಬಳಕೆ ಆರೋಪ ಮಾಡಿಕೊಡಿರುವುದರಿಂದ ಇಂದು ರಾಜ್ಯಾದ್ಯಂದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆಯುತ್ತಿದ್ದು,ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದುವರೆದಿದೆ.ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವರಾದ ಆರ್ ಅಶೋಕ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರು ಆಗಮಿಸಿ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.