Publish Date: Tue, 10 Apr 2018 (09:04 IST)
Updated Date: Tue, 10 Apr 2018 (09:06 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿರುವ ಬಿಜೆಪಿ ಇದೀಗ ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸುತ್ತಿದೆ.
ಅದಕ್ಕಾಗಿ ಮತ್ತೆ ತಾಂತ್ರಿಕ ಸಮಿತಿ ಸಭೆ ಸೇರಿದ್ದು, ಎರಡನೇ ಪಟ್ಟಿ ತಯಾರಿ ನಡೆಸುತ್ತಿದೆ ಎನ್ನಲಾಗಿದೆ. ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗದೇ ಇರುವುದಕ್ಕೆ ಕೆಲವರು ಈಗಾಗಲೇ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಳಿ ಲಾಭಿ ನಡೆಸುತ್ತಿದ್ದಾರೆ.
ಎರಡನೇ ಪಟ್ಟಿಯನ್ನು ನಾಳೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಧ್ಯಮಗಳಿಗೆ ಸುಳಿವು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.