Publish Date: Wed, 10 Jul 2019 (14:37 IST)
Updated Date: Wed, 10 Jul 2019 (14:39 IST)
ದೋಸ್ತಿ ಪಕ್ಷಗಳ ಶಾಸಕರು ರಾಜೀನಾಮೆ ಹಗ್ಗ ಜಗ್ಗಾಟ ಮುಂದುವರಿದಿರುವಂತೆ ಬಿಜೆಪಿ ಕುಮಾರಸ್ವಾಮಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದೆ.
ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಪ್ರಮುಖ ನಗರಗಳಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿಸಿದ್ರು.
ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಧರಣಿಯಲ್ಲಿ ಪಾಲ್ಗೊಂಡ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಿಟ್ಟು ಸರಕಾರ ಉಳಿಸಿಕೊಳ್ಳುವಲ್ಲಿ ಬಡಿದಾಡ್ತಿದೆ.
ರಾಜ್ಯದ ಜನತೆಗೆ ಮೈತ್ರಿ ಸರಕಾರ ಅನ್ಯಾಯ ಎಸಗಿದೆ ಅಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಹಿಂಬಾಗಿಲಿನ ಸರಕಾರ ಕೂಡಲೇ ವಿಸರ್ಜಿಸಬೇಕು. ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಒತ್ತಾಯಿಸಿದ್ರು.