Publish Date: Fri, 31 Mar 2023 (16:36 IST)
Updated Date: Fri, 31 Mar 2023 (16:40 IST)
ನಾವು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ B.Y. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯ, ಅಂತಿಮವಾಗಿ ಮಾಜಿ ಸಿಎಂ B.S. ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಮೀಕ್ಷೆಗಳು ನಡೆಯುತ್ತಿರುತ್ತವೆ. ಈ ಬಾರಿ ನಮ್ಮ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಹಿಡಿಯುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ರು.. ಮೀಸಲಾತಿ ಚುನಾವಣಾ ಗಿಮಿಕ್ ಎಂಬ ವಿರೋಧ ಪಕ್ಷದ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅವರ ಸರ್ಕಾರದಲ್ಲಿ ಏಕೆ ಮಾಡಲಿಲ್ಲ.. ಈಗ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು.