Publish Date: Thu, 18 Oct 2018 (22:16 IST)
Updated Date: Thu, 18 Oct 2018 (22:25 IST)
ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಹೇಳಿದ್ದಾರೆ. ಉಪ ಚುನಾವಣೆ ಪ್ರಚಾರಕ್ಕೆ ಯಾವುದೇ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನಲೆಯಲ್ಲಿ ಬೈಂದೂರು ನಲ್ಲಿ ಚುನಾವಣಾ ಪ್ರಚಾರ ಸಭೆ ಯಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಆಗಮಿಸಿದರು .ಬಳಿಕ ಬಜ್ಪೆ ಶಾರದಾ ಸಮಿತಿಯಿಂದ ನಡೆಯುವ ಶಾರದಾ ಮಹೋತ್ಸವದಲ್ಲಿ ಪಾಲ್ಗೊಂಡು ಶಾರದಾ ಮಾತೆ ದರ್ಶನ ಪಡೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯೆಡಿಯೂರಪ್ಪ ಮುಂಬರುವ ಲೋಕಸಭಾ ಹಾಗೂ ವಿಧಾನ ಸಭಾ ಚುನಾವಣೆಗೆ ಪಕ್ಷ ಈಗಾಗಲೇ ಪ್ರಚಾರ ಆರಂಭಿಸಿದೆ. ಆದರೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ . ಬಿಜೆಪಿ ಉಪ ಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕೂಟಕ್ಕೆ ಹೀನಾಯ ಸೋಲು ಉಂಟಾಗಲಿದೆ ಎಂದು ಹೇಳಿದರು.
ಕೇಂದ್ರ ಸರಕಾರದ ಸಾಧನೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಬಿಜೆಪಿ ಮುಖಂಡರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕ್ಯಾಪ್ಟನ್ ಬ್ರಜೇಶ್ ಚೌಟ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.