Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಅಶ್ಲೀಲ ವೀಡಿಯೋ ಇದೆ ಎಂದು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ ನಗರದ ಚಂದ್ರಶೇಖರ ಸ್ವಾಮಿಯ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
22 ವರ್ಷದ ರಾಹುಲ್ ಭಟ್ ಸಿಸಿಬಿ ಅಧಿಕಾರಿಗಳು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಿ ತನಿಖಾಧಿಕಾರಿಗಳಿಂದ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನಗಳ ಪೊಲೀಸರ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಕರಣದ ಹಿಂದಿನ ರಹಸ್ಯವೇನು ಎಂಬುದನ್ನು ಮಾಹಿತಿ ಕಲೆಹಾಕಲಿದ್ದಾರೆ. ನಕಲಿ ವಿಡಿಯೋ ಸೃಷ್ಟಿಸಿ ಹಣ ನೀಡದಿದ್ದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಬೀಡುವುದಾಗಿ ಬೆದರಿಕೆಯೊ ಡ್ಡಿದ್ದಾರೆ ಎನ್ನಲಾಗಿದೆ. ಡಿ.25 ರಂದು ಸಚಿವರ ಪಿಎಗೆ ವಿಡಿಯೋ ಕಳಿಸಿದ್ದರು. ಈ ಹಿನ್ನೆಲೆ ಸಚಿವ ಸೋಮಶೇಖರ್ ಪುತ್ರ ನಿಶಾಂತ್ ರಿಂದ ಸಿಸಿಬಿಗೆ ದೂರು ನೀಡಿ ದುಷ್ಪರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಸಿಬಿ ಪೊಲೀಸರಿಂದ ಪ್ರಕರಣ ದಾಖಲಾಗಿದೆ.