Webdunia - Bharat's app for daily news and videos

Install App

ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

Webdunia
ಶನಿವಾರ, 14 ಮೇ 2022 (13:10 IST)
ಮಂಗಳೂರು:  ಯುವತಿಯೊಬ್ಬಳಿಗೆ ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರವೆಸಗಿ ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
 
ಉಳ್ಳಾಲ ನಿವಾಸಿ ಶಾನ್ ನವಾಸ್ (36) ಬಂಧಿತ ಆರೋಪಿ. ಮೂಡುಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದ, ಇಷ್ಟೇ ಅಲ್ಲದೆ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್‌ನಲ್ಲಿ ಚಿತ್ರಿಕರಣ ಮಾಡಿದ್ದ‌. 
 
ನಂತರ ಹಣ ನೀಡಬೇಕೆಂದು ಬೆದರಿಕೆ ಹಾಕಿ 1.5ಲಕ್ಷ ಸುಲಿಗೆ ಮಾಡಿದ್ದ. ವಿವಿಧ ಕಡೆಗಳಲ್ಲಿನ ಲಾಡ್ಜ್‌ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ನೊಂದ ಯುವತಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
 
ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಳ್ಳುವಂತೆ ಕಡತವನ್ನು ಮಂಗಳೂರು ನಗರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. 
 
ಆರೋಪಿಯು ಯುವತಿಯನ್ನು ನಗರದ ವಿವಿಧ ಲಾಡ್ಜ್‌, ಪುಣೆ, ಮುಂಬೈಯ ವಿವಿಧ ಲಾಡ್ಜ್‌ಗಳಲ್ಲಿ, ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದು ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ