Publish Date: Fri, 01 Sep 2017 (12:55 IST)
Updated Date: Fri, 01 Sep 2017 (13:15 IST)
ಮಹಿಳೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕ ಆರೋಪಿಗೆ ಜನರು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಭೀಮಸಮುದ್ರದಲ್ಲಿ ವರದಿಯಾಗಿದೆ.
ವಿವಾಹಿತ ಮಹಿಳೆಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ನಂತರ ಅಸಭ್ಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದ. ನಂತರ ಮಹಿಳೆಗೆ 15 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಮಹಿಳೆಗೆ ನಿರಂತರವಾಗಿ ಕರೆ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ, 15 ಲಕ್ಷ ರೂಪಾಯಿ ನೀಡದಿದ್ದಲ್ಲಿ ಮಾನ ಮರ್ಯಾದೆ ಹರಾಜು ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಮೂಲಗಳು ತಿಳಿಸಿವೆ.
ಆ್ರರೋಪಿ ಇಂದು ಭೀಮಸಮುದ್ರದಲ್ಲಿರುವುದು ಪತ್ತೆ ಹಚ್ಚಿದ ಮಹಿಳೆಯ ಕುಟುಂಬದವರು ಆತನನ್ನು ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ವಿಚಾರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.