Publish Date: Tue, 14 Sep 2021 (11:55 IST)
Updated Date: Tue, 14 Sep 2021 (11:57 IST)
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿಯೊಂದನ್ನು ನೀಡಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಯಾಣ ದರ ಏರಿಕೆಗೆ ಬಿಎಂಟಿಸಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಇಟ್ಟಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ದರ ಹೆಚ್ಚಳ ಬೇಡ ಎಂದು ಹೇಳಿದ್ದಾರೆ ಎಂದರು.
ರಾಜ್ಯ ಸರ್ಕಾರಕ್ಕೆ ಹೊರೆಯಾದ್ರೂ ಪರವಾಗಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.