Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿಯ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ದ್ವಿಚಕ್ರವಾಹನದ ಸವಾರ ಬಲಿ ಆಗಿದ್ದು ಬೆಂಗಳೂರಿನ ಲುಲು ಮಾಲ್ ಮುಂಭಾಗದ ಅಂಡರ್ ಪಾಸಿನಲ್ಲಿ ಈ ಘಟನೆ ಸಂಭವಿಸಿದೆ.ಬಿಎಂಟಿಸಿಯ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.