Publish Date: Thu, 28 Sep 2023 (15:42 IST)
Updated Date: Thu, 28 Sep 2023 (15:48 IST)
ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಮುಂಜಾಗ್ರತಾ ಕ್ರಮಕ್ಕೆ ಬಿಎಂಟಿಸಿ ಮುಂದಾಗಿದೆ.ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಕ್ರಮಕೈಗೊಂಡಿದೆ.ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆಗೆ ನಿಗಮ ಮನವಿಮಾಡಿದೆ.ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಗಮ ತಿಳಿಸಿದೆ.ಬೆಂಗಳೂರು ಬಂದ್ ಇದ್ದಾಗಲು ಸೂಕ್ತ ಕ್ರಮಕ್ಕಾಗಿ ನೋಟೀಫಿಕೇಷನ್ ನಿಗಮಗಳು ಹೊರಡಿಸಿದೆ.ಈ ಕರ್ನಾಟಕ ಬಂದ್ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.