ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾದ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಶೇ.10ರಷ್ಟು ನಷ್ಟ ಅನುಭವಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ನಾಭಿರಾಜ್ ಜೈನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ-ಪಶ್ಚಿಮ ಕಾರಿಡಾರ್‌ನಲ್ಲಿ ಮೆಟ್ರೋ ಸಂಚಾರ ಆರಂಭವಾದ ಬಳಿಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಕುಸಿತ ಕಂಡಿದೆ ಎಂದು ತಿಳಿಸಿದರು.
ನಮ್ಮ ಮೆಟ್ರೋ ರೈಲಿನಿಂದ ಮಾತ್ರ ಸಾರ್ವಜನಿಕರ ಸಾರಿಗೆ ಸೇವೆ ಒದಗಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ಪೂರಕವಾಗಿ ಬಿಎಂಟಿಸಿ ಬಸ್ ಸೇವೆಯ ಅತ್ಯಗತ್ಯ ಎಂದು ಸಂಸ್ಥೆಯ ಅಧ್ಯಕ್ಷ ನಾಭಿರಾಜ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .