Select Your Language

Notifications

webdunia
webdunia
webdunia
webdunia

ಇವಿಎಂ ಬದಲಿಕೆ ಬ್ಯಾಲಟ್ ಪೇಪರ್ ಎಂದ ಸಿದ್ದರಾಮಯ್ಯಗೆ ಸವಾಲೆಸೆದ ಬೊಮ್ಮಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯ

Sampriya

ಬೆಂಗಳೂರು , ಶನಿವಾರ, 6 ಸೆಪ್ಟಂಬರ್ 2025 (17:25 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ನೀಡಿ ಸರಿಯಿಲ್ಲ ಎಂದು ಹೇಳಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸವಾಲೆಸೆದರು.  

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್‌ಗಳಲ್ಲಿ ಅಕ್ರಮ, ಗೊಂದಲ ಬಹಳ ಆಗ್ತಿತ್ತು. ಇದನ್ನು ತಪ್ಪಿಸಲು ಇವಿಎಂಗಳು ಬಂದ್ವು. 2004, 2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇವಿಎಂಗೆ ತಕರಾರು ಇರಲಿಲ್ಲ ಎಂದು ಟಾಂಗ್‌ ನೀಡಿದರು.

ಸಿದ್ದರಾಮಯ್ಯ ಗೆದ್ದಿದ್ದೇ ಇವಿಎಂನಿಂದ.‌ ಇವರು ಗೆಲ್ಲೋದಿಕ್ಕೆ ಇವಿಎಂ ಬೇಕಾಗಿತ್ತು. ಇವಿಎಂಗಳಲ್ಲಿ ಗೊಂದಲ, ದೋಷ ಕಂಡುಬಂದಿದ್ದರೆ ಅದಕ್ಕೆ ಸೂಕ್ತ ದಾಖಲೆ ನೀಡಲಿ. ಈಗ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್‌ಗಳನ್ನು ಅನುಭವದ ಮೇಲೆ ತರ್ತಿದ್ದೇವೆ ಅಂದಿದ್ದಾರೆ ಸಿಎಂ ಎಂದು ಕಿಡಿಕಾರಿದರು.

ನಿಮಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಡಿ. ರಾಜೀನಾಮೆ ಕೊಟ್ಟು ಎವಿಎಂ ಸರಿಯಿಲ್ಲ ಅಂತ ಹೇಳಿ ಎಂದು ಬೊಮ್ಮಾಯಿ ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶದ ಟಿಟಿಡಿ ಆರೋಗ್ಯ ಯೋಜನೆಗೆ ಬೆಂಗಳೂರಿ ಭಕ್ತರಿಂದ ₹1ಕೋಟಿ ಕೊಡುಗೆ