Publish Date: Sun, 07 Aug 2022 (09:22 IST)
Updated Date: Sun, 07 Aug 2022 (09:11 IST)
ಬೆಂಗಳೂರು : ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು,
ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.
ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್. ಹಾಗೂ ಎಸ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಿದ್ದು,
ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ, ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.