ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ರಾಜ್ಯದ ರಾಜಧಾನಿಯಲ್ಲಿ ವಿಭಿನ್ನವಾಗಿ ಪುಸ್ತಕೋತ್ಸವ – 2018 ಆಯೋಜಿಸಲಾಗುತ್ತಿದೆ.
ಪ್ರಕಾಶಕರ ಸಂಘ, ಬೆಂಗಳೂರು ಪುಸ್ತಕ ಮಾರಾಟಗಾರರು ಹಾಗೂ ಇಂಡ್ಯಾ ಸಂಸ್ಥೆ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ಬೆಂಗಳೂರು ಪುಸ್ತಕೋತ್ಸವ 2018 ಆಯೋಜಿಸಲಾಗುತ್ತಿದೆ.
ದೇಶದ ಎಲ್ಲ ಭಾಷೆಗಳ ಪುಸ್ತಕಗಳು ಮಾರಾಟಕ್ಕೆ ಲಭ್ಯವಾಗಲಿವೆ. 300 ಕ್ಕೂ ಮಳಿಗೆಗಳನ್ನು ಆರಂಭಿಸಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಓದುವ ಪ್ರವೃತ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಸ್ತಕೋತ್ಸವ ಯಶಸ್ವಿಯಾಗಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.