ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದ ದುಬಾರಿ ದಂಡ ಟ್ರಾಫಿಕ್ ರೂಲ್ಸ್ ಕಡಿತಕ್ಕೆ ಇಂದೇ (ಸೋಮವಾರ) ಬ್ರೇಕ್ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಸೆಪ್ಟಂಬರ್ 1 ರಂದು ಜಾರಿಗೆ ತಂದ ದುಬಾರಿ ದಂಡ ಟ್ರಾಫಿಕ್ ರೂಲ್ಸ್ ವಾಹನ ಸವಾರರಿಗೆ ಹೊರೆಯಾಗಿ ಮರಿಣಮಿಸಿದ ಹಿನ್ನಲೆಯಲ್ಲಿ ವಾಹನ ಸವಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈಗಾಗಲೇ ಗುಜರಾತ್, ಮಹಾರಾಷ್ಟ್ರ ಮೊದಲಾದ ರಾಜ್ಯಗಳು ದುಬಾರಿ ದಂಡವನ್ನು ಕಡಿತಗೊಳಿಸಿದೆ
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಟ್ರಾಫಿಕ್ ದಂಡ ಕಡಿತ ಮಾಡುವುದಾಗಿ ಘೋಷಿಸಿದ್ದರು. ಈಗಾಗಲೇ ಸಾರಿಗೆ ಇಲಾಖೆಯು ದಂಡ ಮೊತ್ತದ ಇಳಿಕೆ ಪ್ರಮಾಣವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶನಿವಾರ ಮತ್ತು ಭಾನುವಾರ ಸರ್ಕಾರಿ ರಜೆ ದಿನವಾಗಿದ್ದರಿಂದ ಆದೇಶ ಹೊರಬಿದ್ದಿರಲಿಲ್ಲ. ಬಹುತೇಕ ಇಂದು ಆದೇಶ ಹೊರಬೀಳುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.