Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲಂಚ ಪ್ರಕರಣ: ಸಚಿವ ಚಿಂಚನಸೂರ್ ಕೈಬಿಡುವಂತೆ ಪ್ರಹ್ಲಾದ್ ಜೋಷಿ ಒತ್ತಾಯ

ಲಂಚ ಪ್ರಕರಣ: ಸಚಿವ ಚಿಂಚನಸೂರ್ ಕೈಬಿಡುವಂತೆ ಪ್ರಹ್ಲಾದ್ ಜೋಷಿ ಒತ್ತಾಯ
ಹುಬ್ಬಳ್ಳಿ , ಗುರುವಾರ, 26 ಮೇ 2016 (12:22 IST)
ಜವಳಿ ಸಚಿವ ಬಾಬುರಾವ್ ಚಿಂಚನಸೂರ್ ಲಂಚದ ಸುದ್ದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಅವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಚಿಂಚನಸೂರ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಮುಖ್ಯಮಂತ್ರಿಯವರು ತಕ್ಷಣವೇ ಇವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇವರನ್ನು ಕೈಬಿಡದಿದ್ದರೆ, ಈ ಭ್ರಷ್ಟ ಹಣದಲ್ಲಿ ತಮ್ಮಗೂ ಪಾಲು ಇದೆ ಎಂದು ಅರ್ಥ. ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇನ್ನೂ ಖಾಸಗಿ ಸುದ್ದಿ ವಾಹಿನಿಯಲ್ಲಿ ಸಚಿವರ ಭ್ರಷ್ಟಾಚಾರ ಸುದ್ದಿ ಪ್ರಸಾರವಾಗುತ್ತಿದಂತೆ ಮುಂಜಾನೆ 10 ಗಂಟೆಯಿಂದ ಯಾದಗಿರಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಸಂಪೂರ್ಣವಾಗಿ ವಿದ್ಯುತ್ ಕಡಿತಗೊಂಡಿದೆ. ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಯಾದಗಿರಿ ಮತ್ತು ಕಲಬುರಗಿಯಲ್ಲಿ ಕರವೇ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸರಕಾರದ ಎರಡು ವರ್ಷದ ದುರಾಡಳಿತ: ಕಾಂಗ್ರೆಸ್‌ನಿಂದ ಕಿರುಚಿತ್ರ, ಪುಸ್ತಕ ಬಿಡುಗಡೆ