ಹಾವೇರಿ: ಅಣ್ಣನ ಹೆಂಡತಿ ಅತ್ತಿಗೆ ಹಾಗೂ ಇಬ್ಬರು ಮಕ್ಕಳನ್ನು ಮೈದುನನೇ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಇಲ್ಲಿ ನಡೆದಿದೆ.
ಮೇಲ್ನೋಟಕ್ಕೆ ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ. 32 ವರ್ಷದ ಗೀತಾ, ಆಕೆಯ 10 ಮತ್ತು 7 ವರ್ಷದ ಇಬ್ಬರು ಮಕ್ಕಳನ್ನು ಮೈದುನ ಕುಮಾರ್ ಗೌಡ ಕೊಲೆ ಮಾಡಿದ್ದಾನೆ.
ಮೃತ ಮಹಿಳೆಯ ಪತಿ ದುಬೈನಲ್ಲಿ ನೌಕರಿ ಮಾಡುತ್ತಿದ್ದಾರೆ. ಇದೀಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.