ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧದ ಮಧ್ಯೆಯೇ ಇವತ್ತು ಕಲಬುರಗಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಬೃಹತ್ ಸಮಾವೇಶ ನಡೆಯುತ್ತಿದೆ. ಸಮಾವೇಶವನ್ನ ಯಶಸ್ವಿಗೊಳಿಸಲು ಜಲಸಂಪನ್ಮೂಲ ಸಚಿವ ೆಂ.ಬಿ. ಪಾಟೀಲ್ ಸ್ವತಃ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಸಮಾವೇಶದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರತ್ಯೇಕ ಧರ್ಮದ ಬ್ಯಾನರ್`ಗಳು ರಾರಾಜಿಸುತ್ತಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಬೆಂಬಲಿಸುವ ಮಠಾಧೀಶರು, ರಾಜಕಾರಣಗಳು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಅಧಿಕ ಮಂದಿ ಸಮಾವೇಶಕ್ಕೆ ಸೇರುವ ನಿರೀಕ್ಷೆ ಇದೆ. ನಗರದ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಗರದ ಎನ್`ವಿ ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿ ಆಯೋಜಿಸಲಾಗಿದ್ದು, ಸಚಿವ ಎಂ.ಬಿ. ಪಾಟೀಲ್ ಸಮಾವೇಶದ ತಯಾರಿಗಳ ಪರಿಶೀಲನೆ ನಡೆಸಿದ್ದಾರೆ. ಇತ್ತ, ವೀರಶೈವ ಲಿಂಗಾಯತರ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ಹಲವೆಡೆ ಹಲವೆಡೆ ಅರಿವು ಮೂಡಿಸುವ ಪ್ರಯತ್ನ ಸಹ ನಡೆಸಿದ್ದಾರೆ. ಒಟ್ಟಿನಲ್ಲಿ ಪ್ರತ್ಯೇಲ ಲಿಂಗಾಯತ ಧರ್ಮದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ