Publish Date: Sat, 05 Aug 2023 (19:44 IST)
Updated Date: Sat, 05 Aug 2023 (19:06 IST)
ಜೈಲಿನಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ. ಸಿದ್ದಾಪುರ ಮಹೇಶ್ ಹತ್ಯೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ. ಮಹೇಶ್ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ ಲೀಡರ್ ಆಗಿದ್ದ ಎಂದು ವರದಿಯಾಗಿದೆ.
ಹೊಸ ರೋಡ್ ಜಂಕ್ಷನ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶನ ಮೇಲೆ ಅಟ್ಯಾಕ್ ಮಾಡಿದ ಆರೋಪಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ಧಾರೆ.