Select Your Language

Notifications

webdunia
webdunia
webdunia
webdunia

ದುರುಳರು ಯಾವುದೇ ಜಾತಿ, ಧರ್ಮದವರಾಗಲಿ ಸುಮ್ಮನೆ ಬಿಡಲ್ಲ: ಸಿಎಂ ಸಿದ್ದರಾಮಯ್ಯ

Siddaramaiah

Sampriya

ಮಂಡ್ಯ , ಗುರುವಾರ, 12 ಸೆಪ್ಟಂಬರ್ 2024 (19:30 IST)
ಮಂಡ್ಯ: ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಿಎಂ ಪೋಸ್ಟ್‌ನಲ್ಲಿ ಹೀಗಿದೆ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌, ಸಿಎಂ ಸಿದ್ದರಾಮಯ್ಯಗೆ ತಾತ್ಕಲಿಕ ರಿಲೀಫ್