ಬೆಳೆಹಾನಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಅತೀ ಹೆಚ್ಚು ಪರಿಹಾರವನ್ನು ನೀಡಲಾಗುತ್ತಿದೆ.
ಒಣ ಹಾಗೂ ನೀರಾವರಿ ಆಶ್ರಿತ ಬೆಳೆಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಹತ್ತು ಸಾವಿರ ರೂಪಾಯಿ ನೀಡಲಿದೆ. ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಒಣ ಬೇಸಾಯದ ಬೆಳೆಗೆ ಮೊದಲು ಆರು ಸಾವಿರ ಹಾಗೂ ನೀರಾವರಿ ಬೆಳೆಗೆ 13 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಇದೇ ಮೊದಲ ಸಲ ಹತ್ತು ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುತ್ತದೆ ಅಂತ ಹೇಳಿದ್ರು.
ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಲು ಈಗಾಗಲೇ ಐದು ಲಕ್ಷ ರೂಪಾಯಿ ಘೋಷಿಸಲಾಗಿದ್ದು, ಇಷ್ಟೊಂದು ಪರಿಹಾರ ನೀಡುತ್ತಿರುವುದು ಕೂಡ ಇದೇ ಮೊದಲ ಬಾರಿ ಎಂದರು.