ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದು ಗೊಳಿಸಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಣೆಗೆ ತರಲಾಗಿತ್ತು. ಆಗ ಅಲ್ಪಸಂಖ್ಯಾತ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಟಿಪ್ಪು ಜಯಂತಿ ಆಚರಣೆಯ ಜವಾಬ್ದಾರಿ ವಹಿಸಲಾಗಿತ್ತು.
ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಟಿಪ್ಪು ಜಯಂತಿ ಆಚರಣೆ ನಡೆದಿತ್ತು.
ಸಿದ್ದರಾಮಯ್ಯರ ಕ್ರಮ ಹಾಗೂ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದ ಟಿಪ್ಪು ಜಯಂತಿಯ ಉತ್ಸವದ ವೇಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.
ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಟಿಪ್ಪು ಜಯಂತಿ ಆಚರಣೆಯನ್ನ ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.