Publish Date: Tue, 20 Mar 2018 (10:19 IST)
Updated Date: Tue, 20 Mar 2018 (10:20 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಇಂದು ಬೆಳಿಗ್ಗೆ ತುರ್ತು ಸಭೆ ಕರೆಯಲಾಗಿದ್ದು, ಬಿಜೆಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಿದ್ದಾರೆ.
ನಿನ್ನೆಯಷ್ಟೇ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸಿದ್ದರು.
ಈ ಹಿನ್ನಲೆಯಲ್ಲಿ ಇದರ ಬಗ್ಗೆ ಚರ್ಚಿಸಲು ಬಿಜೆಪಿ ನಾಯಕರನ್ನು ಒಗ್ಗೂಡಿಸಿ ಬಿಎಸ್ ವೈ ಇಂದು ಸಭೆ ನಡೆಸುತ್ತಿದ್ದಾರೆ. ಈ ವಿಚಾರವನ್ನು ಹೇಗೆ ಪರಿಗಣಿಸಬೇಕು, ಕೇಂದ್ರಕ್ಕೆ ಯಾವ ರೀತಿ ಒತ್ತಡ ತರಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ