Publish Date: Tue, 07 Aug 2018 (09:13 IST)
Updated Date: Tue, 07 Aug 2018 (09:15 IST)
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಧ‍್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಧಾನಿ ಮೋದಿಯನ್ನು ತಬ್ಬಿಕೊಂಡಿದ್ದು ಅಪ್ರಬುದ್ಧತೆ ಎಂದಿದ್ದ ಎಚ್ ವಿಶ್ವನಾಥ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.
ಮಹಾಘಟಬಂಧನ್ ಮಾಡಿಕೊಳ್ಳಲು ಬಯಸುವವರು ತಮ್ಮ ಪ್ರಧಾನಿ ಅಭ್ಯರ್ಥಿ ಬಗ್ಗೆ ಹೇಳಿದ ಮಾತು ನೋಡಿ. ಮಹಾಘಟಬಂಧನ್ ನ ಒಂದು ಭಾಗ ತನ್ನ ಪ್ರಧಾನಿ ಅಭ್ಯರ್ಥಿ ಅಪ್ರಬುದ್ಧ ಎಂದು ಒಪ್ಪಿಕೊಳ್ಳುವ ಧೈರ್ಯ ಮಾಡಿದೆ ಎಂದು ನನಗೆ ಸಂತೋಷವಾಗುತ್ತಿದೆ’ ಎಂದು ಬಿಎಸ್ ವೈ ಟಾಂಗ್ ಕೊಟ್ಟು ಟ್ವೀಟ್ ಮಾಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಚ್ ವಿಶ್ವನಾಥ್ ರಾಹುಲ್ ಗಾಂಧಿ ನಡೆ ಮಕ್ಕಳಾಟಿಕೆ ಎಂದು ಬಣ್ಣಿಸಿದ್ದರು. ಇದನ್ನು ಉಲ್ಲೇಖಿಸಿ ಬಿಎಸ್ ವೈ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಟಾಂಗ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Tue, 07 Aug 2018 (09:13 IST)
Updated Date: Tue, 07 Aug 2018 (09:15 IST)