ಬೆಂಗಳೂರು: ಸಿಎಂ ಕುಮಾರಸ್ವಾಮಿ ರಾಜ್ಯದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿರುವ ಬೆನ್ನಲ್ಲೇ ಮಿತ್ರ ಪಕ್ಷಗಳ ನಡುವೆ ಉಂಟಾಗಿರುವ ವೈಮನಸ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಬಿಎಸ್ ವೈ ಇದು 37 ಶಾಸಕರ ಬಜೆಟ್. ಇದರಿಂದ ಜನರಿಗೆ ಒಳ್ಳೆಯದಾಗದು ಎಂದು ಲೇವಡಿ ಮಾಡಿದ್ದಾರೆ.
‘ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ನರ್ತನ ಮುಂದುವರಿದಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನೇ ಬಜೆಟ್ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಇದು 37 ಶಾಸಕರ ಬಜೆಟ್. ಇದು ಸರ್ಕಾರವನ್ನು ಪ್ರತಿನಿಧಿಸುವುದಿಲ್ಲ. ಹಾಗೆಯೇ ಇಂತಹ ಬಜೆಟ್ ಕೆಲವೇ ಕೆಲವು ಪ್ರದೇಶಗಳನ್ನು ಮಾತ್ರ ಕೇಂದ್ರವಾಗಿಟ್ಟುಕೊಂಡು ಮಂಡಿಸಲಾಗುತ್ತದೆ. ಇದರಿಂದ ಕರ್ನಾಟಕಕ್ಕೆ ಒಳಿತಾಗದು’ ಎಂದು ಬಿಎಸ್ ವೈ ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.